ಸ್ಥಳೀಯ ಸುದ್ದಿಗಳು

ಕುಡಿಯುವ ನೀರು ಮತ್ತು ಜಾತ್ರೆಗೆ ಭದ್ರ ನೀರು ಹರಿಸಲು ಸೂಚನೆ

ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ಹರಿಸಲು ಸೂಚಿಸಲಾಗಿದೆ.‌ ಉತ್ತರ ಕರ್ನಾಟಕದ ಬಹುತೇಕ ನಗರಗಳಿಗೆ ಬಹುಗ್ರಾಮ ನದಿ ನಿರು ಕುಡಿಯುವ ಯೋಜನೆ ಮತ್ತು ಮೈಲಾರೇಶ್ವರ ಜಾತ್ರೆಗಾಗಿ ನದಿಗೆ ನೀರು ಹರಿಸಲಾಗುತ್ತಿದೆ.  ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.

ಸುದ್ದಿಲೈವ್/ಶಿವಮೊಗ್ಗ

2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಗದಗ, ಬೆಟಗೇರಿ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಕುಡಿಯುವ ನೀರು ಒದಗಿಸಲು ಯೋಜಿಸಲಾಗಿದೆ.‌

ಮತ್ತು ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ದಿನಾಂಕ: 05-02-2024 ರ ರಾತ್ರಿ 10.00 ರಿಂದ 10-02-2024 ರ ರಾತ್ರಿ 10 ಗಂಟೆಯವರೆಗೆ ಪ್ರತಿ ದಿನ 2000 ಕ್ಯೂಸೆಕ್ಸ್‍ನಂತೆ ಒಟ್ಟು 12000 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು.

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/8205

Related Articles

Leave a Reply

Your email address will not be published. Required fields are marked *

Back to top button