ಕ್ರೈಂ ನ್ಯೂಸ್

ವಾಹನ ಮಾಲೀಕರೆ ಎಚ್ಚರ! ಅಪ್ರಾಪ್ತ ಬಾಲಕರಿಗೆ ವಾಹನ ಕೊಡುವ ಮುನ್ನ ಎಚ್ಚರವಿರಲಿ!

ಸುದ್ದಿಲೈವ್/ಶಿವಮೊಗ್ಗ

ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ಕೊಟ್ಟ ಕಾರಣಕ್ಕೆ ವಾಹನದ ಮಾಲೀಕನಿಗೆ ನ್ಯಾಯಾಲಯ ದಂಡ ವಿಧಿಸಿ ತೀರ್ಪು ನೀಡಿದೆ

ಜ.30 ರಂದು ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ ಐ  ನವೀನ್ ಕುಮಾರ್ ಮಠಪತಿ,  ನಗರದ ಎಸ್ ಪಿ.ಎಂ.ರಸ್ತೆಯ ಕೋಟೆ ಆಂಜನೇಯನ ದೇವಾಲಯದ ಹತ್ತಿರ ವಾಹನ ತಪಾಸಣೆ ಮಾಡುವಾಗ 17 ವರ್ಷದ ಅಪ್ರಾಪ್ತ  ಬಾಲಕನೊಬ್ಬನು ವಾಹನ ಚಾಲನಾ ಪರವಾನಿಗೆ ಇಲ್ಲದೆ ಮೊಪೆಡ್ ಅನ್ನು ಚಾಲನೆ ಮಾಡಿಕೊಂಡು ಬಂದಿದ್ದ.

ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು, ಅಪ್ರಾಪ್ತ ವಯ್ಯಸ್ಸಿನ ಬಾಲಕನಿಗೆ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರ  ವಿರುದ್ಧ  ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು.

ಘನ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಲಾಗಿರುತ್ತು. ಘನ 3ನೇ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಮೊಪೆಡ್ ವಾಹನದ ಮಾಲೀಕರಿಗೆ ರೂ 30,000/- ದಂಡ ವಿಧಿಸಿರುತ್ತಾರೆ.

ಇದನ್ನೂ ಓದಿ-https://suddilive.in/archives/8634

Related Articles

Leave a Reply

Your email address will not be published. Required fields are marked *

Back to top button

Notice: ob_end_flush(): Failed to send buffer of zlib output compression (0) in /home/twzwscfi/suddilive.in/wp-includes/functions.php on line 5373