ಕ್ರೈಂ ನ್ಯೂಸ್

ಮೂರು ಬೈಕ್ ಗಳ ನಡುವೆ ಡಿಕ್ಕಿ ಮೂವರಿಗೆ ಗಾಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.

ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್​ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್​ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್​ ಸವಾರ ಟರ್ನ್​ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್​ ಮುಂದಿನ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಆಯನೂರು ಕಡೆಯಿಂದ ಬರುತ್ತಿದ್ದ ಬೈಕ್​ ಎದುರು ಆಕ್ಸಿಡೆಂಟ್ ಆದ ಬೈಕ್​ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿದ್ದ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ. ಇನ್ನೂ ಆಯನೂರು ಕಡೆಯಿಂದ ಬರುತ್ತಿದ್ದ ಬೈಕ್ ಸವಾರನಿಗೂ ಗಾಯವಾಗಿದೆ.

ವಿಷಯ ತಿಳಿಯುತ್ತಲೇ ಸ್ಥಳದಲಿದ್ದವರು ಆ್ಯಂಬುಲೆನ್ಸ್​ಗೆ ಕರೆ ಮಾಡಿ ಮೂವರನ್ನ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಸದ್ಯ ಮೂವರು ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದಾರೆ . ಆಯನೂರು ಉಪಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಬಂಧ ಪೊಲೀಸರು ಮಹಜರು ನಡೆಸಿದ್ದಾರೆ.

ಇದನ್ನೂ ಓದಿ-https://suddilive.in/archives/860

Related Articles

Leave a Reply

Your email address will not be published. Required fields are marked *

Back to top button