ಉದ್ಯೋಗ ಸುದ್ದಿಗಳು

ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ : ಪಾಲ್ಗೊಳ್ಳಲು ನೋಂದಾಯಿಸಿಕೊಳ್ಳಿ

ಸುದ್ದಿಲೈವ್/ಶಿವಮೊಗ್ಗ

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳಬಹುದು.
50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದ್ದು, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‍ಲೈನ್

https://skillconnect.kaushalkar.com ಲಿಂಕ್‍ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-255294, ಮೊ.ಸಂ: 8310285799 ಅಥವಾ ಸಹಾಯವಾಣಿ ಸಂಖ್ಯೆ 18005999918(ವಿಸ್ತರಣಾ ಸಂಖ್ಯೆ-4) ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್ ಎಂ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/9001

Related Articles

Leave a Reply

Your email address will not be published. Required fields are marked *

Back to top button