ರಾಜ್ಯ ಸುದ್ದಿಗಳು

ಸಿದ್ದರಾಮಯ್ಯನವರ ಗ್ಯಾರೆಂಟಿ ಬಜೆಟ್-ಶಿವಮೊಗ್ಗಕ್ಕೆ ಒಲಿದ ಯೋಜನೆಗಳು?

ಸುದ್ದಿಲೈವ್/ಶಿವಮೊಗ್ಗ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಸಭೆಯಲ್ಲಿ 15 ನೇ ಬಾರಿ ಬಜೆಟ್ ನ್ನ‌ ಮಂಡಿಸಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದು ಎರಡನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ ಬಜೆಟ್ ನ್ನ  ಗ್ಯಾರಂಟಿ ಬಜೆಟ್ ಅಂತನೇ ಕರೆಯಲಾಗುತ್ತಿದೆ.‌

ಈ ಬಾರಿ ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಹಲವು ಯೋಜನೆಗಳನ್ನ ಘೋಷಿಸಲಾಗಿದೆ. ಆಹಾರ ಪಾರ್ಕ್, IPHL ಪ್ರಯೋಗಾಲಯ, ಶಿವಮೊಗ್ಗ-ಬೊಮ್ಮನ್ ಕಟ್ಟೆ ರಸ್ತೆಯಲ್ಲಿ ರೈಲು ಮೇಲು-ಕೆಳ ಸೇತುವೆ,  ತಾರಾಲಾಯ/ವಿಜ್ಞಾನ ಕೇಂದ್ರ‌‌ ಸ್ಥಾಪನೆ, ಹೈಸೆಕ್ಯೂರಿಟಿ ಕಾರಾಗೃಹ ನಿರ್ಮಾಣದ ಘೋಷಣೆಯನ್ನ ಮಾಡಲಾಗಿದೆ.

1. ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು.

2. ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದ‌ರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು.

3. ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್. ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಆರು ಕಡೆ , ರೈಲ್ವೇ ಮೇಲು-ಕೆಳಸೇತುವೆಗಳ ನಿರ್ಮಾಣವನ್ನು 350 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗುವುದು.

4. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು.

5. ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು.

6. ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಿಸಲಾಗುವುದು.

ಇದನ್ನೂ ಓದಿ-https://suddilive.in/archives/9080

Related Articles

Leave a Reply

Your email address will not be published. Required fields are marked *

Back to top button