ಕ್ರೈಂ ನ್ಯೂಸ್
ಭದ್ರಾವತಿಯಲ್ಲಿ ಯುವಕನೋರ್ವನಿಗೆ ಚಾಕು ಇರಿತ

ಸುದ್ದಿಲೈವ್/ಭದ್ರಾವತಿ

ನಡೆದುಕೊಂಡು ಹೋಗುತ್ತಿದ್ದ ಯುವನಿಗೆ ಚಾಕುವಿನಿಂದ ಇರಿಯಲಾಗಿದ್ದು ಈ ಪ್ರಕರಣ ಕೋಮು ಬಣ್ಣ ಪಡೆದುಕೊಳ್ಳುತ್ತಿದೆ.
ಭದ್ರಾವತಿಯ ಹೊನಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಂದ ಕುಮಾರ್ ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಇರಿತಕ್ಕೆ ಕಾರಣ ವೇನು? ಹಾಗೂ ಈತ ಎಲ್ಲಿಗೆ ಹೋಗುತ್ತಿದ್ದ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.
ಹೊಸಮನೆ ಠಾಣೆ ವ್ಯಾಪ್ತಿಯ ಹನುಮಂತ ನಗರದಲ್ಲಿ ಈ ಘಟನೆ ನಡೆದಿದ್ದು ನಂದ ಕುಮಾರ್ ನನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಸುತ್ತ ಖಾಕಿ ಸರ್ಪಗಾವಲು ಹೆಣೆಯಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ. ನಂದ ಕುಮಾರನ ಬೆನ್ನಿಗೆ ಆಯುಧದಿಂದ ಇರಿಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ-https://suddilive.in/archives/903
