ಸ್ಥಳೀಯ ಸುದ್ದಿಗಳು

ಸಿಐಟಿಯು ಮತ್ತು ರಾಜ್ಯ ರೈತ ಸಂಘ ಜಂಟಿ‌ ಪ್ರತಿಭಟನೆ

ಸುದ್ದಿಲೈವ್/ಶಿವಮೊಗ್ಗ

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಅಖಿಲ ಭಾರತ ಕರೆಯ ಮೇರೆಗೆ ಫೆ.16 ರಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ಮತ್ತು ಸಿಐಟಿಯುವಿನ ಹನುಮಕ್ಕನವರ ನೇತೃತ್ವದಲ್ಲಿ ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಮೆರವಣಿಗೆ ಬಂದ ಎರಡೂ ಸಂಘಟನೆಗಳು ಜಂಟಿಯಾಗಿ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜೊತೆ ಯುದ್ಧ ಮಾಡುವ ಹಾಗೆ ರೈತರ ಮೇಲೆ ಲಾಠಿ ಪ್ರಹಾರ, ರಬ್ಬರ್ ಬುಲೆಟ್, ರಾತ್ರಿ ರಸ್ತೆಯಲ್ಲಿ ಮಲಗಿರುವ ರೈತರ ಮೇಲೆ ಆಶ್ರುವಾಯು ಸಿಡಿಸಿರುವುದು ಭಯಾನಕ ಕೃತ್ಯವಾಗಿದೆ. ಈ ರೀತಿ ಅಮಾನವೀಯ ದೌರ್ಜನ್ಯವನ್ನು ನೋಡಿದರೆ ನಾವು ಪ್ರಜಾಪ್ರಭುತ್ವದಲ್ಲಿ ಇದ್ದೆವೆಯೋ ಅಥವಾ ಸರ್ವಾಧಿಕಾರಿ ರಾಷ್ಟ್ರದಲ್ಲಿ ಇದ್ದೆವೆಯೋ ಎಂದು ಸರ್ಕಾರಕ್ಕೆ ಪ್ರಶ್ನೆ ಕೇಳಬೇಕಾಗಿದೆ.

ರೈತರ ಶಾಂತಿಯುತ ಚಳುವಳಿಯನ್ನು ದೌರ್ಜನ್ಯದಿಂದ ಕೇಙದ್ರ ಸರ್ಕಾರ ತಡೆಹಿಡಿಯಲು ಮುಂದಾಗಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಮತ್ತು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿರುವ ರೈತರ ಹಕ್ಕನ್ನು ರಕ್ಷಿಸಬೇಕು. ರೈತರ, ಕಾರ್ಮಿಕರ ನ್ಯಾಯಯುತವಾದ ಒತ್ತಾಯಗಳನ್ನು ತಕ್ಷಣವೇ ಈಡೇರಿಸಬೇಕೆಂದು ಆಗ್ರಹಿಸಲಾಯಿತು.

ಕೇಂದ್ರ ಸರ್ಕಾರಕ್ಕೆ ಹಕ್ಕೋತ್ತಾಯಗಳು:

1) ರೈತರ ಉತ್ಪನ್ನಗಳಿಗೆ ಎಂ.ಎಸ್ ಸ್ವಾಮಿನಾಥನ್ ಶಿಫಾರಸ್ಸಿನ C2+50% ಪ್ರಕಾರ ಕನಿಷ್ಟ ಬೆಂಬಲ ಬೆಲೆ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು. ರೈತರಿಗೆ ನೀಡುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುತ್ ಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳವಾಗಬೇಕು. ರೈತರ ಆತ್ಮಹತ್ಯೆ ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು.

2) ಕಾರ್ಪೊರೇಟ್ ಪರವಾದ ಸಿ.ಎಂ ಫಸಲ್ ಭೀಮಾ ಯೋಜನೆಯನ್ನು ರದ್ದುಪಡಿಸಿ, ಎಲ್ಲಾ ಬೆಳೆಗಳಿಗೂ ವಿಮೆ ಒದಗಿಸುವ ಸಮಗ್ರ ಸಾರ್ವಜನಿಕ ವಿಮಾ ಯೋಜನೆ ಜಾರಿ ಹಾಗೂ ಸಮಗ್ರ ಸಾಲ ಮನ್ನಾ ಯೋಜನೆ ಜಾರಿಗೆ ತರಬೇಕು.

3) ಐತಿಹಾಸಿಕ ದೆಹಲಿ ರೈತ ಹೋರಾಟದ ಸಂಧರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಜಾರಿ ಮಾಡಬೇಕು. ಸಿಂಗು ಗಡಿಯಲ್ಲಿ ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಜಾಗ, ಅವರ ಕುಟುಂಬಕ್ಕೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು. ಹೋರಾಟ ಸಂದರ್ಭದಲ್ಲಿ ರೈತರ ಮೇಲೆ ಹಾಕಿರುವ ಎಲ್ಲಾ ಪೋಲಿಸ್ ಕೇಸ್‌ಗಳನ್ನು ವಾಪಾಸ್ಸು ಪಡೆಯಬೇಕು.

4) ವಿದ್ಯುತ್ ರಂಗವನ್ನು ಖಾಸಗೀಕರಣಗೊಳಿಸುವ ವಿದ್ಯುತ್ ತಿದ್ದುಪಡಿ ಮಸೂದೆ 2022ನ್ನು ಸಂಸತ್ತಿನಿಂದ ವಾಪಾಸ್ಸು ಪಡೆಯಬೇಕು. ಯಾವುದೇ ಕಾರಣಕ್ಕೂ ಪ್ರೀ ಪೇಯ್ಡ್ ಮೀಟರ್ ಅಳವಡಿಸಬಾರದು.

5) ರೈತನಿಂದ ಸ್ವಾಧೀನ ಪಡಿಸಿಕೊಂಡ ಭೂಮಿಗೆ ರೈತನೇ ರೈತನಿಗೆ ಸಮಪಾಲು ನೀಡಬೇಕು. ಮಾಲೀಕನಾಗಿರಬೇಕು, ಬರುವ ಆದಾಯದಲ್ಲಿ ರೈತರಿಗೆ ಸಮಪಾಲು ನೀಡಬೇಕು.

6) ಅರಣ್ಯ ಹಕ್ಕು ಕಾಯ್ದೆ ತಿದ್ದುಪಡಿ ಮಾಡಿ 15ವರ್ಷಕ್ಕೂ ಹೆಚ್ಚಿಗೆ ಸಾಗುವಾಳಿ ಮಾಡಿದ ಪ್ರತಿಯೊಬ್ಬ ರೈತನಿಗೂ ಸಾಗುವಾಳಿ ಹಕ್ಕುಪತ್ರ ನೀಡಬೇಕು.

7) ರೈತ ಮಹಿಳೆಯರನ್ನು ರೈತರು ಎಂದು ಪರಿಗಣಿಸಿ ರೈತರಿಗೆ ಸಿಗುವ ಎಲ್ಲಾ ಸೌಲಭ್ಯ ಸಿಗುವಂತಾಗಬೇಕು ಮತ್ತು SHG ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಕೃಷಿಗಾಗಿ ಸಾಲ ಪಡೆದ ಮಹಿಳೆಯರ ಸಾಲ ಮನ್ನಾ ಮಾಡಬೇಕು.

8) ಭಾರತೀಯ ಕಾರ್ಮಿಕ ಸಮ್ಮೇಳನವನ್ನು ನಿಯಮಿತವಾಗಿ ಆಯೋಜಿಸಬೇಕು. ಅದರ ನಿರ್ಣಯಗಳನ್ನು ಸರ್ಕಾರಗಳು ಜಾರಿ ಮಾಡಬೇಕು ಎಂದು ಹಕ್ಕೋತ್ತಾಯ ಮಾಡಲಾಗಿದೆ.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಇ.ಬಿ.ಜಗದೀಶ್, ರಾಜ್ಯ ಉಪಾಧ್ಯಕ್ಷ ಟಿ.ಬಿ.ಚಂದ್ರಪ್ಪ, ಕಸೆಟ್ಟಿ ರುದ್ರೇಶ್, ಪಿ.ಡಿ.ಮಂಜಪ್ಪ, ಕೆ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು.‌

ಇದನ್ನೂ ಓದಿ-https://suddilive.in/archives/9099

Related Articles

Leave a Reply

Your email address will not be published. Required fields are marked *

Back to top button