ರಾಷ್ಟ್ರೀಯ ಸುದ್ದಿಗಳು

ಪಿಎಂಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನೊಂದಣಿ ಅಭಿಯಾನ

ಸುದ್ದಿಲೈವ್/ಶಿವಮೊಗ್ಗ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ವ್ಯಾಪ್ತಿಗೆ ಎಲ್ಲಾ ಸಾಗುವಳಿ ರೈತರನ್ನ ಸೇರಿಸವ ಉದ್ದೇಶದಿಂದ ಫೆ.12 ರಿಂದ 21 ರವರೆಗೆ 10 ದಿನಗಳ ವರೆಗೆ ರಾಷ್ಟ್ರವ್ಯಾಪಿ ವಿಶೇಷ ಅಭಿಯಾನ ಆರಂಭಗೊಂಡಿದೆ.

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ ರೂ. 6000/- ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರನ್ನು ಈ ಯೋಜನೆಯ ವ್ಯಾಪ್ತಿಗೆ ತರಲು ಫೆ. 12 ರಿಂದ 21 ರವರೆಗೆ 10 ದಿನಗಳ ರಾಷ್ಟ್ರವ್ಯಾಪಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಅರ್ಹ ರೈತರ ನೋಂದಣಿಯೊಂದಿಗೆ ಈಗಾಗಲೇ ನೋಂದಣಿಯಾಗಿರುವ ರೈತರ ಬಾಕಿಯಿರುವ ಇ-ಕೆವೈಸಿ ಮಾಡಿಸಲು ಮತ್ತು ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವ ಮೂಲಕ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್‍ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಪಿಎಂಕಿಸಾನ್ ಇ-ಕೆವೈಸಿ ಫೇಸ್ ರೆಗ್ನನೇಷನ್ ಆಪ್ ಮೂಲಕ ಇ-ಕೆವೈಸಿ ಮಾಡಿಸುವಂತೆ ಕೋರಲಾಗಿದೆ.

ಇದನ್ನೂ ಓದಿ-https://suddilive.in/archives/9131

Related Articles

Leave a Reply

Your email address will not be published. Required fields are marked *

Back to top button