ಸ್ಥಳೀಯ ಸುದ್ದಿಗಳು

ಗುತ್ತಿಗೆ ಆಧಾರದಲ್ಲಿ ತಜ್ಞ ವೈದ್ಯರ ಹುದ್ದೆ ಭರ್ತಿಗೆ ನೇರ ಸಂದರ್ಶನ

ಸುದ್ದಿಲೈವ್/ಶಿವಮೊಗ್ಗ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಆಯ್ಕೆ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಖಾಲಿ ಇರುವ ಫಿಸಿಷಿಯನ್-02, ಸರ್ಜರಿ-02, ಸ್ತ್ರೀರೋಗ ತಜ್ಞ-05, ಅರಿವಳಿಕೆ-09, ಇಎನ್‍ಟಿ-01, ನೇತ್ರ ತಜ್ಞ-03, ಮಕ್ಕಳ ತಜ್ಞ-03, ಕೀಲುಮೂಳೆ-01 ಮತ್ತು ನೆಫ್ರೋಲಜಿಸ್ಟ್ 01 ಒಟ್ಟು 27 ತಜ್ಞ ವೈದ್ಯಾಧಿಕಾರಿಗಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆರೋಗ್ಯ ವಿಸ್ತರಣಾ ಕೇಂದ್ರಗಲಲ್ಲಿ ಖಾಲಿ ಇರುವ ಎಂಬಿಬಿಎಸ್ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳ ನೇರ ಸಂದರ್ಶನ ಕರೆಯಲಾಗಿದೆ. ತಜ್ಞರಿಗೆ ಎನ್‍ಹೆಚ್‍ಎಂ ಮಾರ್ಗಸೂಚಿಗಳನುಸಾರ ಸಂಭಾವನೆ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಫೆ.21 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾಯಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂ: 08182-222382 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ-https://suddilive.in/archives/9136

Related Articles

Leave a Reply

Your email address will not be published. Required fields are marked *

Back to top button