ಕ್ರೈಂ ನ್ಯೂಸ್

ಶಾಲಾ ಬಸ್ ಪಲ್ಟಿ, ಬಸ್ ನಲ್ಲಿದ್ದ ಮಕ್ಕಳಿಗೆ ಗಾಯ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಖಾಸಗಿ ಶಾಲಾ ಬಸೊಂದು ಪಲ್ಟಿ ಹೊಡೆದಿದೆ. 20 ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ನಡೆದಿದೆ.

ಚಾಲಕ ನಿಯಂತ್ರಣ ತಪ್ಪಿ ಭದ್ರಾವತಿಯ ಸ್ಪೂರ್ತಿ ಇಂಟರ್ ನ್ಯಾಷನಲ್ ಶಾಲೆಯ ವಾಹನ ಪಲ್ಟಿಯಾಗಿದ್ದು, ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನ ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ- ಚಿಕಿತ್ಸೆ ನೀಡಲಾಗಿದೆ.

ಸ್ಥಳಕ್ಕೆ ಭದ್ರಾವತಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ-https://suddilive.in/archives/9190

Related Articles

Leave a Reply

Your email address will not be published. Required fields are marked *

Back to top button