ರಾಜ್ಯ ಸುದ್ದಿಗಳು

ಭದ್ರ ನದಿ ನಾಲೆ ಸುತ್ತಮುತ್ತ 144 ಸೆಕ್ಷನ್ ಜಾರಿ

ಸುದ್ದಿಲೈವ್/ಶಿವಮೊಗ್ಗ

ಭದ್ರ ನಾಲೆಯಿಂದ ಹಾವೇರಿ ಜಿಲ್ಲೆಗೆ ನೀರು ಹರಿಸಲು ಕ್ರಮ ಕೈಗೊಂಡ ಬೆನ್ನಲ್ಲೇ ಜಿಲ್ಲಾಧಿಕಾರಿ ಗುರುದತ್ತ ಜಿ ಹೆಗಡೆ ಸೆಕ್ಷನ್ 144 ನ್ನ ಜಾರಿ ಮಾಡಿ ಆದೇಶಿಸಿದ್ದಾರೆ. ನದಿ ಮತ್ತು ನಲೆಯ ಪಾತ್ರದಲ್ಲಿ ಸೆಕ್ಷನ್ ಜಾರಿ ಮಾಡಿ ಆದೇಶಿಸಲಾಗಿದೆ.

ಭದ್ರ ನಾಲೆಯಿಂದ ಹರಿಸಿದ ನೀರು ಕೊನೆ ಹಂತದ ವರೆಗೂ ತಲುಪದ ಬೆನ್ನಲ್ಲೇ ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಗಳು ನೀರು ತಲುಪುತ್ತಿಲ್ಲವೆಂದು ಆಕ್ಷೇಪಿಸಿದ್ದರು. ಕಾರಣ ನಾಲೆಯಲ್ಲಿ 20 ಸಾವಿರ ಪಂಪ‌್ ಸೆಟ್ ಗಳ ಅಳವಡಿಕೆ ಕೊನೆ ಹಂತರ ನಾಲೆಗೆ ತಲುಪಿಲ್ಲದಾಗಿದೆ.

ಈ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಭಾರತೀಯಾ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ದಿನಾಂಕ: 19.02.2024 ರಿಂದ ದಿನಾಂಕ: 26.02.2024ರವರೆಗೆ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಪ್ರದೇಶದ ಸುತ್ತ-ಮುತ್ತಲು 100 ಮೀ ವ್ಯಾಪ್ತಿಯಲ್ಲಿ ಈ ಕೆಳಕಂಡ ನಿಬಂಧನೆಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿರುತ್ತಾರೆ.

ನಿಬಂಧನಗಳು

1. ನದಿ ಮತ್ತು ಕಾಲುವೆಗಳ ಪ್ರದೇಶದಲ್ಲಿ ಅನಧಿಕೃತವಾಗಿ ರೈತರು ಹೊಲಗಳಿಗೆ ನೀರನ್ನು ಹರಿಸುವುದಾಗಲೀ ಅಥವಾ ಪಂಪ್ ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿದೆ.

2. ಐದು (05) ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಬಂಧಿಸಿದೆ.

3. ನಿಷೇಧಾಜ್ಞೆ ಸಮಯದಲ್ಲಿ ಶಸ್ತ್ರ, ಬಡಿಗೆ,ಬರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದಂತಹ ಯಾವುದೇ ಮಾರಕಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ನಿಷೇಧಿಸಿದೆ.

4. ಕಲ್ಲುಗಳನ್ನು ಕ್ಷಾರಾಪದಾರ್ಥಳನ್ನ ಇಲ್ಲವೇ ಸ್ಫೋಟಕ ವಸ್ತುಗಳು, ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ಶೇಖರಿಸುವುದನ್ನು ನಿಷೇಧಿಸಿದೆ.

5. ಬಹಿರಂಗವಾಗಿ ಘೋಷಣೆಗಳನ್ನು ಕೂಗುವುದು. ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಮಾಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನಗಳನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಿದೆ.

6. ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮೇಲೆ ವಿವರಿಸಿರುವ ಮಾರಕಾಸ್ತ್ರಗಳು, ಸ್ಪೋಟಕಗಳು, ಸ್ಫೋಟಕ ವಸ್ತುಗಳು, ವಿನಾಶಕರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದಲ್ಲಿ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.

ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಆದೇಶಿಸಲಾಗಿದೆ.

ಇದನ್ನೂ ಓದಿ-https://suddilive.in/archives/9315

Related Articles

Leave a Reply

Your email address will not be published. Required fields are marked *

Back to top button