ಸ್ಥಳೀಯ ಸುದ್ದಿಗಳು

ಬಿಜೆಪಿಗೆ ಟೀಕೆ ಟಿಪ್ಪಣಿ ಮಾಡುವುದೇ ಒಂದು ಕಾಯಕ-ಮಧು ಬಂಗಾರಪ್ಪ

ಸುದ್ದಿಲೈವ್/ಶಿವಮೊಗ್ಗ

ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತಿದ್ದು, ನಾಳೆಯಿಂದ ರಾಗಿ ಮಾಲ್ಟ್ ವಿತರಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಈ ಸರಕಾರವನ್ನು ರಾಜ್ಯದ ಹೆಣ್ಣು ಮಕ್ಕಳು ಎತ್ತಿದ್ದಾರೆ. ಅದನ್ನು ಮುಂದೆ ತೆಗೆದುಕೊಂಡು ಹೋಗುವ ಕೆಲಸವನ್ನು ನೀವು ಮಾಡಬೇಕಿದೆ. ಅದರ ಜವಬ್ದಾರಿ ನಮ್ಮದು ಎಂದರು.

ಶಿವಮೊಗ್ಗ ಜಿಲ್ಲೆಗೆ 100 ಹೊಸ ಕೆಎಸ್ ಆರ್ ಟಿಸಿ ಬಸ್ ಸಂಚರಿಸಲಿದೆ. ಸದ್ಯಕ್ಕೆ 10 ಬಸ್ ಬಂದಿದೆ.ಹಂತ ಹಂತವಾಗಿ ಫೆ.24 ರಂದು ನಡೆಯುವ ಗ್ಯಾರಂಟಿ ಸಮಾವೇಶದಲ್ಲಿ ಬಸ್ ಉದ್ಘಾಟಿಸಲಾಗುವುದು

ಕೆಎಫ್ ಡಿಗೆ ಪರಿಹಾರ

ಕೆಎಫ್ ಡಿ ಕಾಯಿಲೆಯಿಂದ ಮೃತಪಟ್ಟವರಿಗೆ ಪರಿಹಾರ ಕೊಡುವ ವಿಚಾರದಲ್ಲಿ ಕೆಎಫ್ ಡಿಯಿಂದ ಮೃತಪಟ್ಟವರಿಗೆ ಪರಿಹಾರ ಕೊಡಬೇಕು ಅಂತಾ ಸರಕಾರದ ಗಮನಕ್ಕೆ ತಂದಿದ್ದೇನೆ. ಕೆಎಫ್ ಡಿಯಿಂದ ಮೃತಪಟ್ಟವರ ಮಾಹಿತಿ ಕೊಡಲು ಸೂಚಿಸಿದ್ದೇನೆ. ಪರಿಹಾರ ಕೊಡುವ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಆನೆ ತುಳಿತಕ್ಕೆ ಪರಿಹಾರ

ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರಕಾರ ಪರಿಹಾರ ವಿಚಾರದ ಬಗ್ಗೆ ಮಾತನಾಡಿದ ಸಚಿವ‌ಮಧು ಬಂಗಾರಪ್ಪ, ಬಂಗಾರಪ್ಪ ಅವರು ಸಿಎಂ ಆಗಿದ್ದಾಗ ಶಿರಡಿಯ ಸತ್ಯಸಾಯಿ ಬಾಬಾ ಆಸ್ಪತ್ರೆಗೆ 2 ಕೋಟಿ ಕೊಟ್ಟಿದ್ದರು. ಅದಕ್ಕು ವಿರೋಧ ಮಾಡಿದ್ರು

ನಮ್ಮ ರಾಜ್ಯದ ರೋಗಿಗಳು ಆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಅಂದಿದ್ದರು. ಅದೇ ರೀತಿ ಆನೆ ತುಳಿದು ಮೃತಪಟ್ಟಿದ್ದಕ್ಕೆ ಪರಿಹಾರ ಕೊಟ್ಟಿದ್ದಾರೆ. ಬಿಜೆಪಿಯವರಿಗೆ ಯಾವುದೇ ಕೆಲಸ ಇಲ್ಲ. ಅದಕ್ಕೆ ಇಂತಹ ಕೆಲಸ ಮಾಡ್ತಾರೆ ಎಂದು ದೂರಿದರು.

ಸರ್ಕಾರ ಆದೇಶಿಸಿಲ್ಲ

ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಘೋಷವಾಕ್ಯ ಬದಲಾವಣೆ ವಿಚಾರದಲ್ಲಿ  ಸರಕಾರ ಯಾವುದೇ ಆದೇಶ ಮಾಡಿರಲಿಲ್ಲಯಾವುದೋ ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ಗೆ ಗೊದಲ ಆಯ್ತು ಎಂದರು.‌

ಇದನ್ನೂ ಓದಿ-https://suddilive.in/archives/9355

Related Articles

Leave a Reply

Your email address will not be published. Required fields are marked *

Back to top button