ಕ್ರೈಂ ನ್ಯೂಸ್

ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ವೈದ್ಯರ ಅಲಭ್ಯ-ಮಹಿಳೆ ಸಾವು

ಸುದ್ದಿಲೈವ್/ಶಿವಮೊಗ್ಗ

ಹೊಸನಗರ ತಾಲೂಕಿನ ರಿಪ್ಪನಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆಯಿಂದಾಗಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಮಹಿಳೆಯೋರ್ವಳು ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ಲಕ್ಷ್ಮಮ್ಮ (57) ಎಂಬುವರಿಗೆ ಸಕಲದಲ್ಲಿ ಚಿಕಿತ್ಸೆ ದೊರೆಯದೆ ಸಾವನ್ನಪಿದ್ದಾರೆ.

ತಡರಾತ್ರಿ ವೃದ್ಧೆಯ ಆರೋಗ್ಯದಲ್ಲಿ ಏರುಪೇರಾಗಿದೆ. ಲೋ ಬಿಪಿ ಹಿನ್ನಲೆಯಲ್ಲಿ ಅಸ್ವಸ್ಥ ಗೊಂಡಿದ್ದ ವೃದ್ದೆಯನ್ನ ರಿಪ್ಪನಪೇಟೆ ಸರ್ಕಾರಿ ಆಸ್ಪತ್ರೆಗೆ ರೋಗಿಯನ್ನ ಕರೆದುಕೊಂಡು ಕುಟುಂಬಸ್ಥರು ರಿಪ್ಪನ್ ಪೇಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ವೈದ್ಯರು ಕರ್ತವ್ಯ ಕ್ಕೆ ಗೈರು ಹಾಜರಾಗಿದ್ದರಿಂದ ನರ್ಸ್ ಗಳಿಂದ ರೋಗಿಯ ತಪಾಸಣೆ ನಡೆಸಲಾಗಿದೆ ಎಂದು ಕುಟುಂಬ ಆರೋಪಿಸಿದ್ದಾರೆ. ವೃದ್ಧೆಯ ಸ್ಥಿತಿ ಗಂಭೀರ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸರ್ಕಾರಿ ಆಸ್ಪತ್ರೆಯ ನರ್ಸ್ ಗಳು ಸೂಚನೆ ನೀಡಿದ್ದಾರೆ.

ವೃದ್ಧೆಗೆ ಸೂಕ್ತ ಚಿಕಿತ್ಸೆ ರಿಪ್ಪನಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಸಿಗದ ಹಿನ್ನಲೆ ರೋಗಿಯ ಕುಟುಂಬಸ್ಥರ ಪರದಾಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲು ಅಂಬುಲೇನ್ಸ್  ಸಿಗದಂತಾಗಿದೆ. ಒಂದು ಘಂಟೆ ಪರದಾಟ ಬಳಿಕ ಖಾಸಗಿ ವಾಹನದಲ್ಲಿ ಮಹಿಳೆಯನ್ನ ತಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವೃದ್ಧೆಯ ಸ್ಥಿತಿ ಗಂಭೀರ ಹಿನ್ನಲೆಯಲ್ಲಿ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ. ಶಿವಮೊಗ್ಗ ದ ಖಾಸಗಿ ಆಸ್ಪತ್ರೆಗೆ ವೃದ್ದೆ ದಾಖಲಾಗಿದ್ದಾರೆ. ಚಿಕಿತ್ಸೆ ತುಂಬಾ ವಿಳಂಬ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೇ ವೃದ್ಧೆ ಸಾವು ಕಂಡಿದ್ದಾಳೆ.

ರಿಪ್ಪನಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸೇವೆ ಇಲ್ಲದ ಹಿನ್ನಲೆ ವೃದ್ಧೆ ಸಾವಾಗಿದೆ ಎಂದು ಕುಟುಂಬ ಆರೋಪಿಸಿದ್ದಾರೆ. ರಿಪ್ಪನಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧಮೃತರ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಸಿದ್ದಾರೆ.

ರಾತ್ರಿ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಅಲಭ್ಯ ಕಾರಣ ರಿಪ್ಪನಪೇಟೆಯ ಸರ್ಕಾರಿ ವೈದ್ಯರನ್ನ  ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.‌

ಇದನ್ನೂ ಓದಿ-https://suddilive.in/archives/9478

Related Articles

Leave a Reply

Your email address will not be published. Required fields are marked *

Back to top button