ನಿಷೇಧ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ನಿಷೇಧ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಶುಕ್ರವಾರ, ಸೆಪ್ಟೆಂಬರ್ 6, 2024

ಸೆ. 07 ರಂದು ಮಾಂಸ ಮಾರಾಟ ನಿಷೇಧ



ಸುದ್ದಿಲೈವ್/ಶಿವಮೊಗ್ಗ


ಸೆಪ್ಟೆಂಬರ್ 07 ರ ಗಣೇಶ ಚರ್ತುರ್ಥಿ ಹಬ್ಬದ ಆಚರಣೆ ಕಾರಣ ಶಿವಮೊಗ್ಗ ಮಹಾನಹರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. 


ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.

ಶುಕ್ರವಾರ, ಆಗಸ್ಟ್ 23, 2024

ಕೃಷ್ಣ ಜನ್ಮಾಷ್ಟಮಿ-ಮಾಂಸ ಮಾರಾಟ ನಿಷೇಧ



ಸುದ್ದಿಲೈವ್/ಶಿವಮೊಗ್ಗ


ಆಗಸ್ಟ್ 26  ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಂದು ಒಂದು ದಿನ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. 


ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.