ನೀರು ವ್ಯತ್ಯಯ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ನೀರು ವ್ಯತ್ಯಯ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಮಂಗಳವಾರ, ಸೆಪ್ಟೆಂಬರ್ 17, 2024

ಎರಡು ದಿನ ನೀರು ವ್ಯತ್ಯಯ, ಒಂದು ದಿನ ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಶಿವಮೊಗ್ಗ


ಕುಡಿಯುವ ನೀರು ವ್ಯತ್ಯಯನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯಿಂದ ಹೊಸದಾಗಿ ಭೂಗತ ಕೇಬಲ್ ಚಾಲನೆಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಸೆ 18 ಮತ್ತು 19 ರಂದು ಎರಡು ದಿನ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದೆ. 


ವಿದ್ಯುತ್ ವ್ಯತ್ಯಯ


ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ಘಟಕ-6 ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸ್ಥಾವರದ ಹಒಸ 11 ಕೆವಿ ಭೂಗತ ಕೇಬಲ್ ಚಾಲನೆಗೊಳಿಸುವ ಕಾಮಗಾರಿ ನಿರ್ವಹಣೆ ಇರುವುದರಿಂದ ಈ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆ.ಆರ್.ಕುಡಿಯುವ ನೀರಿನ ಸ್ಥಾವರ, ನ್ಯೂಮಂಡ್ಲಿ ವೃತ್ತ, ಮಂಜುನಾಥ ಪೆಟ್ರೋಲ್ ಬಂಕ್, ಎನ್.ಟಿ.ರಸ್ತೆ, ಮೆಸ್ಕಾಂ ಕಚೇರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಸೆ. 18 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.