ವ್ಯತ್ಯಯ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ವ್ಯತ್ಯಯ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸೋಮವಾರ, ಸೆಪ್ಟೆಂಬರ್ 9, 2024

ವಿದ್ಯುತ್ ವ್ಯತ್ಯಯ

 


ಸುದ್ದಿಲೈವ್/ಶಿವಮೊಗ್ಗ


ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯ ಸಂತೇಕಡೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆ. 11 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಿದೆ. 


ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಹಳ್ಳಿ, ಜ್ಯೋತಿನಗರ, ದೊಡ್ಡಿಬೀಲು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ವಿಮಾನ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಪ್ರಕಟಿಸಿದೆ. 

ಮಂಗಳವಾರ, ಸೆಪ್ಟೆಂಬರ್ 3, 2024

ಸೆ. 05 ರಂದು ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಶಿವಮೊಗ್ಗ


ಎಂ.ಆರ್.ಎಸ್. 220 ಕೆವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೇಂದ್ರದ ಮಾರ್ಗಗಳಲ್ಲಿ ಸೆ. 05 ರಂದು ಬೆಳಗ್ಗೆ 09.30 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.


ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ. ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, 


ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, 


ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಬುಧವಾರ, ಆಗಸ್ಟ್ 28, 2024

ಆ.31ರಂದು ವಿದ್ಯುತ್ ವ್ಯತ್ಯಯ

 


ಸುದ್ದಿಲೈವ್/ಶಿವಮೊಗ್ಗ


ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-03 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ  ಆ.31 ರಂದು ಬೆಳಗ್ಗೆ 10.00 ರಿಂದ   ಸಂಜೆ 5.00 ರವರೆಗೆ ಈ ವ್ಯಾಪ್ತಿಗೆ ಬರುವ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 


ಎಸ್.ವಿ. ಬಡಾವಣೆ ಎ,ಬಿ.ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶ, ಎಂ.ಎಂ.ಎಸ್. ಲೇಔಟ್, ಬೋವಿ ಕಾಲೋನಿ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶುಕ್ರವಾರ, ಆಗಸ್ಟ್ 23, 2024

ಆ.25 ರಂದು ಶಿವಮೊಗ್ಗ-ಭದ್ರಾವತಿಯಲ್ಲಿ ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಭದ್ರಾವತಿ/ಶಿವಮೊಗ್ಗ


ಆಗಸ್ಟ್ 25 ರಂದು ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಹಾಗೂ ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 


ಮೆಸ್ಕಾಂ ಗ್ರಾಮಂತರ/ ನಗರ ಉಪವಿಭಾಗ  ದಲ್ಲಿ ವ್ಯವಸ್ಥೆ ಸುಧಾರಣೆ ಕಾಮಗಾರಿಯ ಕಾರಣ ಅಗಸ್ಟ್ 25 ರ ಭಾನುವಾರ ಬೆಳಿಗ್ಗೆ  10 - 30 ರಿಂದ ಸಂಜೆ 05 - 30 ಘಂಟೆವರೆಗೆ ಭದ್ರಾವತಿಯ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ತಯವಾಗಲಿದೆ




ದೊಣಬಘಟ್ಟ, ತಡಸ, ಪದ್ಮೇನಹಳ್ಳಿ, ಬಿ.ಹೆಚ್. ರಸ್ತೆ, ಲೋಯರ್ ಹುತ್ತಾ, ದೊಣಬಘಟ್ಟ  ರಸ್ತೆ, ಕೈಗಾರಿಕಾ ಪ್ರದೇಶ, ಅರಣ್ಯ ಇಲಾಖೆ ದಾಸ್ತಾನು ಕಛೇರಿ, ಹೆಬ್ಬಂಡಿ, ಕವಲುಗೊಂದಿ, ಕಡದಕಟ್ಟೆ, ಐ.ಟಿ.ಐ. ಸುತ್ತಮುತ್ತ, ರೈಲ್ವೆದ್ವಾರ ಮತ್ತು ಲಕ್ಷ್ಮೀಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಗ್ರಾಗಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.



ಶಿವಮೊಗ್ಗ ಗ್ರಾಮಾಂತರ


ಆಗಸ್ಟ್ 25 ರ ತಾವರೆಚಟ್ನಹಳ್ಳಿ 66/11 ಕೆವಿ ವಿವಿ ಕೇಂದ್ರದ ಎಫ್-7 ಚನ್ನಮುಂಬಾಪುರ ಮಾರ್ಗದಲ್ಲಿ ವಾಹಕ ಬದಲಾವಣೆ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗ್ರಾಮಗಳಾದ ರತ್ನಗಿರಿನಗರ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಮೋಜಪ್ಪನ ಹೊಸೂರು ಸುತ್ತಮುತ್ತಲಿನ ಕ್ರಷರ್‌ಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.


ಶಿವಮೊಗ್ಗ ನಗರ ಭಾಗಗಳು


ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾಗ್ ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 25/08/2024 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಊರಗಡೂರು, ಸೂಳೆಬೈಲು, ಮದಾರಿಪಾಳ್ಯ, ಮಳಲಿಕೊಪ್ಪ, ಬೈಪಾಸ್ ರಸ್ತೆ, ವಾದಿ-ಎ-ಹುದಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.